ಕೋವಿಡ್ ಲಾಕ್ಡೌನ್ ಮಾರ್ಗಸೂಚಿಯನ್ನು ಉಲ್ಲಂಘಿಸಿದ ಕಾರಣಕ್ಕೆ ಬಿಜೆಪಿ ನಾಯಕ ಅಣ್ಣಾಮಲೈ ಅವರ ವಿರುದ್ಧ ಕೇಸು ದಾಖಲಿಸಲಾಗಿದೆ. ಅಣ್ಣಾಮಲೆ ಅವರು ಇತ್ತೀಚೆಗಷ್ಟೇ ಬಿಜೆಪಿಯನ್ನು ಸೇರಿಕೊಂಡಿದ್ದರು.
ತಮಿಳುನಾಡಿನ ಕೊಯಮತ್ತೂರು ಕಡೂರಿನ ಪೊಲೀಸ್ ಠಾಣೆಯಲ್ಲಿ ಅಣ್ಣಾಮಲೈ ಅವರ ಸಮೇತ ಇನ್ನು ಐವರ ಮೇಲೆ ಕೋವಿಡ್ ಲಾಕ್ಡೌನ್ ಮಾರ್ಗಸೂಚಿಯನ್ನು ಉಲ್ಲಂಘಿಸಿದ ಕಾರಣಕ್ಕೆ ಕೇಸನ್ನು ದಾಖಲಿಸಲಾಗಿದೆ. ಕೇಸ್ ಯಾರಿಂದ ದಾಖಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿಲ್ಲ


